ಚಿಕ್ಕಮಗಳೂರು: ನಗರದ ಹೊರವಲಯದ ಶಕ್ತಿನಗರದಲ್ಲಿ ಕುಡಿದ ಮತ್ತಿನಲ್ಲಿ ಬಾರ್ನಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ವಾಗ್ವಾದ ಗಲಾಟೆಗೆ ತಿರುಗಿದ್ದು, ಈ ವೇಳೆ ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ಗೆ ಚಾಕುವಿನಿಂದ ಇರಿಯಲಾಗಿದೆ. ಬಾರ್ ಒಳಗಿನಿಂದ ಚಾಕು ತಂದ ಯುವಕ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ಗೆ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಲಾಟೆ ದೃಶ್ವ ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
