ನವದೆಹಲಿ: ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಭಾರತವು ಈಗ ಆರ್ಥಿಕತೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದು, 4.18 ಟ್ರಿಲಿಯನ್ ಅಮೇರಿಕನ್ ಡಾಲರ್ ಗಾತ್ರದೊಂದಿಗೆ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಅಮೆರಿಕ ಹಾಗೂ ಚೀನಾ ಮೊದಲೆರಡು ಸ್ಥಾನದಲ್ಲಿದ್ದು, ಜಾಗತಿಕ ವ್ಯಾಪಾರದ ಅನಿಶ್ಚಿತತೆಗಳ ನಡುವೆಯೂ ಭಾರತದ ಆರ್ಥಿಕತೆ ಉತ್ತಮವಾಗಿದೆ. 2030 ರ ವೇಳೆಗೆ ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲು ತಯಾರಿ ನಡೆಸುತ್ತದ್ದು, ವಿಶ್ವಬ್ಯಾಂಕ್ ಐಎಂಎಫ್, ಮೂಡೀಸ್ ಸೇರಿದಂತೆ ಅನೇಕ ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಗಳು ದನಾತ್ಮಕ ಮುನ್ಸೂಚನೆಯ ರೇಟಿಂಗ್ ನೀಡಿದ್ದು, ಮುಂದಿನ 5 ವರ್ಷದ ವೇಳೆಗೆ 7.3 ಟ್ರಿಲಿಯನ್ ಡಾಲರ್ ಜಿಡಿಪಿ ತಲುಪುವುದಕ್ಕೆ ತಯಾರಿ ನಡೆಯುತ್ತದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
