ಬೆಂಗಳೂರು: 2026ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಈ ಪರೀಕ್ಷೆಯಲ್ಲಿ ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ, ಏಪ್ರಿಲ್ 24ರಂದು ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅರ್ಜಿ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಗೆ ಮಾರ್ಗದರ್ಶನ ನೀಡುವ ದಿಕ್ಸೂಚಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಗಿದ್ದು, ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗಲಿದೆ. KEA ನಡೆಸುವ ಪರೀಕ್ಷೆಗಳು ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಗಳು ಸಂಪೂರ್ಣ ಪಾರದರ್ಶಕವಾಗಿವೆ ಎಂದು ಸಚಿವರು ತಿಳಿಸಿದರು.
