ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಗುಡ್ಡ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ನಿರಂತರವಾಗಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸುತ್ತಿದೆ. ಕಾಡ್ಗಿಚ್ಚನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಹರಸಾಹಸ ಪಟ್ಟಿದ್ದು, ಗುಡ್ಡ ಪ್ರದೇಶದಲ್ಲಿ ಬೀಸುತ್ತಿರುವ ಗಾಳಿಯಿಂದ ನಂದಿಸುವ ಕಾರ್ಯಾಚರಣೆಗೆ ತೀವ್ರ ಅಡ್ಡಿ ಉಂಟಾಗಿದೆ.ಹಲವು ಗಂಟೆಗಳ ನಿರಂತರ ಕಾರ್ಯಾಚರಣೆಯ ಮೂಲಕ ಅಗ್ನಿ ಅವಘಡವನ್ನು ಬಹುಮಟ್ಟಿಗೆ ನಂದಿಸಲಾಗಿದ್ದು,ಮರು ಹೊತ್ತಿಕೊಳ್ಳುವ ಸಾಧ್ಯತೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
