ಮೂಡಿಗೆರೆ: ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್ಗಳನ್ನು ಎಂ–ಆಧಾರ್ ಆಪ್ ಮೂಲಕ ತಪಾಸಣೆ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಅಕ್ರಮ ವಲಸಿಗರ ಪತ್ತೆಹಚ್ಚುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
