ಚಿಕ್ಕಮಗಳೂರು ಜಿಲ್ಲೆಯಲ್ಲಿ ಉಂಟಾದ ಅಕಾಲಿಕ ಮಳೆಯ ಅಬ್ಬರದಿಂದ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದ್ದಕ್ಕಿದ್ದಂತೆ ಸುರಿದ ಮಳೆಯಿಂದ ಕಾಫಿ ನೀರಲ್ಲಿ ತೇಲಿ ಹೋಗಿದ್ದು, ಮೋಡ ಕವಿದ ವಾತಾವರಣದಲ್ಲಿ ಕಾಫಿ ಒಣಗಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಕಾಲಿಕ ಮಳೆಯ ಪರಿಣಾಮವಾಗಿ ಅಡಿಕೆ, ಕಾಫಿ ಹಾಗೂ ಕಟಾವಿಗೆ ಬಂದ ಭತ್ತ ನೆಲಕಚ್ಚುವ ಆತಂಕದಲ್ಲಿ ರೈತರಿದ್ದಾರೆ. ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಗುಡುಗು–ಸಿಡಿಲು ಸಹಿತ ಜೋರು ಮಳೆಯಾಗಿದ್ದು, ಇದರಿಂದ ಬೆಳೆಗಾರರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.
