
ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನಲ್ಲಿ ಖಾಲಿ ಇರುವ ಸುಮಾರು 1,300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ ‘O’) 1,100 ಹಾಗೂ ಅಸಿಸ್ಟಂಟ್ ಮ್ಯಾನೇಜರ್ 200 ಹುದ್ದೆಗಳಿದ್ದು, ಕರ್ನಾಟಕದಲ್ಲಿಯೇ ಸುಮಾರು 75 ಹುದ್ದೆಗಳು ಖಾಲಿ ಇವೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಭಾಷೆಯಲ್ಲಿ ಪರಿಣಿತಿ ಇರಬೇಕು ಮತ್ತು ಕನಿಷ್ಠ 2 ವರ್ಷಗಳ ಅನುಭವವೂ ಅಗತ್ಯವಾಗಿದೆ. ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 20 ರಿಂದ ಗರಿಷ್ಠ 25 ವರ್ಷ ವಯೋಮಿತಿ ಇದ್ದು, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆಯೂ ಇದೆ. ಅರ್ಜಿ ಶುಲ್ಕವಾಗಿ ಎಸ್ಸಿ/ಎಸ್ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಹಾಗೂ ಇತರ ಅಭ್ಯರ್ಥಿಗಳು 1,050 ರೂ. ಪಾವತಿಸಬೇಕು. ಅಭ್ಯರ್ಥಿಗಳ ಆಯ್ಕೆ ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 19 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
ಜೂನಿಯರ್ ಅಸಿಸ್ಟೆಂಟ್ ಮ್ಯಾನೆಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
https://ibpsreg.ibps.in/idbijamfeb26/
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
https://ibpsreg.ibps.in/idbiamnov25/
ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ವಿಳಾಸ: http://idbibank.in ಗೆ ಭೇಟಿ ನೀಡಿ





