
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಲಿಂಗ ಸಮಾನತೆಯನ್ನು ಸಾರುವಂತ ಘಟನೆ ನಡೆದಿದೆ. ಭಾವಸಾರ ಸಮಾಜದ ಬಿ.ಎಸ್. ವಿಶ್ವನಾಥ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಅವರ ಮಗಳು ಐಶ್ವರ್ಯ ತಂದೆಯ ಅಂತ್ಯಸಂಸ್ಕಾರವನ್ನು ಸ್ವತಃ ನೆರವೇರಿಸಲು ನಿರ್ಧರಿಸಿದರು. ಕುಟುಂಬದ ಹಿರಿಯರು ಸಹ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದ ಹಿನ್ನೆಲೆ ಐಶ್ವರ್ಯ ತನ್ನ ತಂಗಿ ಮತ್ತು ಭಾವನ ಜೊತೆ ಸೇರಿ ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗಳನ್ನು ನಡೆಸಿದರು. ಹೆಗಲ ಮೇಲೆ ಕುಡಿಕೆ ಹೊತ್ತು ತಂದೆಯ ಮೃತದೇಹದ ಸುತ್ತ ಸುತ್ತಿ ಅಂತಿಮ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಈ ಇಬ್ಬರು ಹೆಣ್ಣುಮಕ್ಕಳು ಎಲ್ಲರ ಗಮನ ಸೆಳೆದರು. ಈ ಘಟನೆ ಸ್ಥಳೀಯರಲ್ಲಿ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಸಮಾಜದಲ್ಲಿ ಲಿಂಗ ಸಮಾನತೆಯ ಸಂದೇಶವನ್ನು ಸಾರಿದ ಉದಾಹರಣೆಯಾಗಿ ಪರಿಗಣಿಸಲಾಗಿದೆ. ಯುವತಿಯರ ಈ ಧೈರ್ಯಶಾಲಿ ಕಾರ್ಯಕ್ಕೆ ಸಮಾಜದವರು ಹಾಗೂ ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:






