ನವದೆಹಲಿ: ಸಕಲೇಶಪುರದ ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್ ಅವರು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕುಗಳಲ್ಲಿ ತೀವ್ರವಾಗಿರುವ ಕಾಡಾನೆ ಸಮಸ್ಯೆಗೆ ಶ್ರೀಲಂಕಾ ಮಾದರಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಸಮಸ್ಯೆಗೊಳಗಾದ ಪ್ರದೇಶಗಳಿಗೆ ಕರೆದುಕೊಂಡು ಬಂದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
