
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಕಾಲಭೈರವೇಶ್ವರ ದೇವಸ್ಥಾನದ ಸಮೀಪ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಸ್ತೆ ಮಧ್ಯೆ ಬಸ್ಸಿನ ಚಕ್ರ ಕಳಚಿ ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಗೊಂದಲ ಉಂಟಾಗಿ, ಬಸ್ಸಿನ ನಿರ್ವಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.



