ಚಿಕ್ಕಮಗಳೂರು: ನಗರದ ಐಜಿ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಹಾಸಿಗೆ, ಬೀರು, ಕುಷನ್, ಸೋಫಾ ಸೆಟ್, ದಿವಾನ್ ಕಾಟ್ ಸೇರಿದಂತೆ ಬಹುತೇಕ ಸಾಮಾನುಗಳು ಬೆಂಕಿಗಾಹುತಿಯಾಗಿದಿದ್ದು, ಬೆಂಕಿ ಕಾಣುತ್ತಿದ್ದಂತೆ ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ತಕ್ಷಣವೇ ಕೆಲವು ವಸ್ತುಗಳನ್ನು ರಸ್ತೆ ಮೇಲೆ ತೆಗೆದು ಇಡುವ ಮೂಲಕ ರಕ್ಷಿಸಲು ಯತ್ನಿಸಿದರು. ಹಾಸಿಗೆ ಹಾಗೂ ಕುಷನ್ನಂತಹ ಸುಲಭವಾಗಿ ಹೊತ್ತಿ ಉರಿಯುವ ವಸ್ತುಗಳಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿದಿದ್ದು, ಇಡೀ ರಾತ್ರಿ ಸಾಧಾರಣ ಮಳೆಯಾಗಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದವು. ನಗರದ ಪ್ರಮುಖ ರಸ್ತೆಯಾಗಿರುವ ಐಜಿ ರಸ್ತೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
