ಬೆಂಗಳೂರು:ಹಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್ ಚಿನ್ನದ 1 ಗ್ರಾಂ ದರದಲ್ಲಿ 75 ರೂ. ಇಳಿಕೆಯಾಗಿ ₹13,500 ಆಗಿದ್ದು, 24 ಕ್ಯಾರಟ್ ಚಿನ್ನದ ದರದಲ್ಲಿ 81 ರೂ. ಇಳಿಕೆಯಾಗಿ ₹14,728ಕ್ಕೆ ತಲುಪಿದೆ. ದೇಶದ ಪ್ರಮುಖ ನಗರಗಳಲ್ಲಿಯೂ ಇದೇ ದರ ಮುಂದುವರಿದಿದೆ. ಇನ್ನು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.