ಬಳ್ಳಾರಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (DCC Bank) 82 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ವ್ಯವಸ್ಥಾಪಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವಾಹನ ಚಾಲಕ ಹಾಗೂ ಕಿರಿಯ ಸೇವಕ ಹುದ್ದೆಗಳು ಲಭ್ಯವಿವೆ. ಪದವಿ, ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಥಮ ದರ್ಜೆ ಹುದ್ದೆಗಳಿಗೆ ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದ್ದರೆ, ದ್ವಿತೀಯ ದರ್ಜೆ ಹುದ್ದೆಗಳಿಗೆ ಪಿಯುಸಿ ಹಾಗೂ ಕಂಪ್ಯೂಟರ್ ಜ್ಞಾನ ಅಗತ್ಯ, ಚಾಲಕರ ಹುದ್ದೆಗೆ ಎಸ್ಎಸ್ಎಲ್ಸಿ ಜೊತೆಗೆ ಮಾನ್ಯ ಚಾಲನಾ ಪರವಾನಗಿ ಮತ್ತು ಕಿರಿಯ ಸೇವಕ ಹುದ್ದೆಗೆ ಎಸ್ಎಸ್ಎಲ್ಸಿ ಪಾಸ್ ಅಗತ್ಯವಾಗಿದೆ. ಎಲ್ಲಾ ಹುದ್ದೆಗಳಿಗೆ ಕನ್ನಡ ಓದು, ಬರಹ ಮತ್ತು ಮಾತನಾಡುವ ಸಾಮರ್ಥ್ಯ ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳೊಳಗೆ ಇರಬೇಕು. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹1000 ಹಾಗೂ ಎಸ್ಸಿ/ಎಸ್ಟಿ ಸೇರಿದಂತೆ ಇತರೆ ವರ್ಗಗಳಿಗೆ ₹500 ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 6ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಮೇ 6, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ ನೇಮಕಾತಿ ನೀಡಲಾಗುತ್ತದೆ. ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ bellarydcc.bank.in ಗೆ ಭೇಟಿ ನೀಡಬಹುದು.
