ಶೃಂಗೇರಿ: ಇಂದು 2025–26ನೇ ಸಾಲಿನ ದ್ವಿತೀಯ ಪದವಿ ಪೂರ್ವ ಪರೀಕ್ಷೆಯ ಪಲಿತಾಂಶ ಪ್ರಕಟಗೊಂಡಿದೆ. ಶೃಂಗೇರಿಯ ಜೆ.ಸಿ.ಬಿ.ಎಂ ಕಾಲೇಜು ಶೈಕ್ಷಣಿಕ ಮೇಲುಗೈ ಸಾಧಿಸಿದ್ದು, ಒಟ್ಟಾರೆ ಶೇ. 98 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 305 ವಿದ್ಯಾರ್ಥಿಗಳಲ್ಲಿ 298 ಮಂದಿ ಉತ್ತೀರ್ಣರಾಗಿದ್ದು, ಕಾಲೇಜಿನ ಸಾಧನೆ ಗಮನ ಸೆಳೆಯಿತು. ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ದೊರೆತಿರುವುದು ವಿಶೇಷವಾಗಿದ್ದು, 122 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 170 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕು. ಇಶಾನ ಅವರು 594 ಅಂಕಗಳು (99%) ಪಡೆದು ಕಾಲೇಜು ಮತ್ತು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆಯುವುದರ ಜೊತೆಗೆ ರಾಜ್ಯ ಮಟ್ಟದಲ್ಲಿ 6ನೇ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ, ಅದೇ ವಿಭಾಗದಲ್ಲಿ ಕು. ಮಾನ್ಯ ಮತ್ತು ಕು. ರಕ್ಷೀತಾ ತಲಾ 587 ಅಂಕಗಳು (98%) ಪಡೆದು ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕು. ದಿವ್ಯಾ ಕೆ.ವಿ 580 ಅಂಕಗಳು (97%) ಪಡೆದು ಪ್ರಥಮ ಸ್ಥಾನದಲ್ಲಿದ್ದು, ಕು. ಪ್ರಜ್ಞಾ ಎಂ.ಆರ್ 577 ಅಂಕಗಳು (96%) ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಗಗನ ಎನ್ 573 ಅಂಕಗಳು (96%) ಪಡೆದು ಪ್ರಥಮ ಸ್ಥಾನದಲ್ಲಿದ್ದು, ಮಣಿಕಂಠ ಹೆಚ್.ಆರ್ 561 ಅಂಕಗಳು (93.5%) ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ವಿಶಿಷ್ಟ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
