ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಚಂದನ್ ಕೆಫೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
