ಚಿಕ್ಕಮಗಳೂರು: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಸೀರೆ ಕೊರಳಿಗೆ ಸಿಲುಕಿ 10 ವರ್ಷದ ಲೇಖನಾ ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಅವಘಡ ಸಂಭವಿಸಿದ್ದು, ಜೋಕಾಲಿಗೆ ಹಾಕಿದ್ದ ಸೀರೆ ಉರುಳಾಗಿ ಕತ್ತು ಸಿಲುಕಿದ ಪರಿಣಾಮ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
