
ಚನ್ನಗಿರಿ: ತಾಲ್ಲೂಕಿನ ದಾವಣಗೆರೆ ಜಿಲ್ಲೆಯ ಸಂತೇಬೇನ್ನೂರು ಹೋಬಳಿಯ ಸಂತೇಬೇನ್ನೂರು ಪೊಲೀಸ್ ಠಾಣೆಯಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಗದೀಶ್ ಅವರ ನೇತೃತ್ವದಲ್ಲಿ ಪಿಎಸ್ಐ ಸಿಬ್ಬಂದಿಗಳು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಪೂರ್ವಕವಾಗಿ ಆಚರಿಸಿದರು. ಈ ವೇಳೆ ಅಂಬೇಡ್ಕರ್ ಅವರ ಸಂವಿಧಾನ ರಚನೆ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶಿಕ್ಷಣದ ಮಹತ್ವದ ಕುರಿತು ಸಿಬ್ಬಂದಿಗಳು ಸ್ಮರಣೆ ಮಾಡಿ ಅವರ ಆದರ್ಶಗಳನ್ನು ಪಾಲಿಸುವ ಅಗತ್ಯವನ್ನು ಒತ್ತಿಹೇಳಿದರು. ಕಾರ್ಯಕ್ರಮದಲ್ಲಿ ಠಾಣೆಯ ಸಿಬ್ಬಂದಿಗಳು ಭಾಗವಹಿಸಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಿದರು.
ವರದಿ: ಕುಳೇನೂರು ಅರುಣ್ ಕುಮಾರ್ ಎ ಚನ್ನಗಿರಿ ತಾಲ್ಲೂಕು




