
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು, ಇದರಂತೆ ದಲಿತ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ 5.25% ಹಾಗೂ ಇತರ ಸ್ಪೃಶ್ಯ ಸಮುದಾಯಗಳಿಗೆ ಶೇ.4.5 ಮೀಸಲಾತಿ ಹಂಚಿಕೆ ಮಾಡಲಾಗಿದೆ. ಇದೇ ವೇಳೆ ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ದೊಡ್ಡ ಸಿಹಿ ಸುದ್ದಿ ನೀಡಿರುವ ಸಿಎಂ, ಬಜೆಟ್ನಲ್ಲಿ ಘೋಷಿಸಿದಂತೆ 56,400 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲಾಗುವುದು ಎಂದು ತಿಳಿಸಿದ್ದು, ಈ ಎಲ್ಲಾ ನೇಮಕಾತಿಗಳಲ್ಲಿ ಹೊಸ ಒಳ ಮೀಸಲಾತಿ ವ್ಯವಸ್ಥೆಯನ್ನೇ ಅನುಸರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.




