
ಚಿಕ್ಕಮಗಳೂರು: ಕಾಫಿನಾಡು ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ಕಾಡಾನೆ ಹಾಗೂ ಕಾಡೆಮ್ಮೆ ದಾಳಿಗಳ ಬಳಿಕ ಇದೀಗ ಕಾಡು ಹಂದಿಗಳ ದಾಳಿಯೂ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಆಲೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಲಕ್ಷ್ಮಿ (41) ಎಂಬ ರೈತ ಮಹಿಳೆಯ ಮೇಲೆ ಕಾಡು ಹಂದಿ ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದು, ಅವರನ್ನು ತಕ್ಷಣ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಲೆನಾಡು ಭಾಗದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ದಾಳಿಗಳು ನಡೆಯುತ್ತಿರುವುದರಿಂದ ಸ್ಥಳೀಯ ರೈತರಲ್ಲಿ ಆತಂಕ ಹೆಚ್ಚಾಗಿದೆ.




