
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೇ 15ರಂದು ತಮ್ಮ ಹುಟ್ಟುಹಬ್ಬದ ದಿನವೇ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದ್ದು, ಇದೇ ಅಂತಿಮ ತೀರ್ಮಾನವೆಂದು ರಾಮನಗರ ಕ್ಷೇತ್ರದ ಶಾಸಕ ಹೆಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ. ಈ ಹಿಂದೆ ಕೂಡ ಡಿಕೆಶಿ ಸಿಎಂ ಆಗುವ ಬಗ್ಗೆ ಹಲವು ದಿನಾಂಕಗಳನ್ನು ಉಲ್ಲೇಖಿಸಿದ್ದಾಗಿ ಹೇಳಿರುವ ಅವರು, ಸಿದ್ಧರಾಮಯ್ಯ ನಂತರ ಸಿಎಂ ರೇಸಿನಲ್ಲಿ ಡಿ.ಕೆ. ಶಿವಕುಮಾರ್ ಮಾತ್ರ ಇದ್ದಾರೆ ಎಂದು ಅಭಿಪ್ರಾಯಪಟ್ಟಿದ್ದು, ಮೇ 15 ಅಂತಿಮ ಗಡುವು ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದಾರೆ, ಇನ್ನು ಇದರ ನಡುವೆ ಶಾಸಕರು ದೆಹಲಿಗೆ ತೆರಳಿದ್ದು ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.




