
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅತ್ತಿಗೆರೆ ಸಂತೋಷ್ ಅವರಿಗೆ ರೈತ ಹಿತರಕ್ಷಣಾ ವೇದಿಕೆ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬಿ.ಕೆ. ಲಕ್ಷ್ಮಣ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತೋಷ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಶುಭಾಶಯ ಕೋರಲಾಯಿತು.
ಈ ಸಂದರ್ಭದಲ್ಲಿ ಮಗ್ಗಲಮಕ್ಕಿ ರವಿ ಗೌಡ, ಅಬ್ದುಲ್ ರೆಹಮಾನ್, ಹ್ಯಾರಗುಡ್ಡೆ ಸುರೇಂದ್ರಣ್ಣ, ಗುರುದೇವ್, ಅನಿಲ್, ನವೀನ್ ಮರೆಬೈಲು ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





