
ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್ನಲ್ಲಿ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಇಂದಿನಿಂದ ನಾಲ್ಕು ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೇ 5ರ ಬೆಳಿಗ್ಗೆ 5 ಗಂಟೆಯಿಂದ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಬಂದ್ ಮಾಡುವುದಾಗಿ ತಿಳಿಸಿದೆ. ಈ ಅವಧಿಯಲ್ಲಿ ಫ್ಲೈಓವರ್ನ ಎರಡೂ ಬದಿಗಳಲ್ಲೂ ಸಂಚಾರಕ್ಕೆ ತಡೆ ವಿಧಿಸಲಾಗಿದ್ದು, ತುಮಕೂರು ರಸ್ತೆ ಹಾಗೂ ಪೀಣ್ಯ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರಯಾಣಿಕರು ಜಾಗರೂಕರಾಗಿ ಸಂಚರಿಸಬೇಕೆಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.




