
ಚಿಕ್ಕಮಗಳೂರು: ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಮೇ 14ರಂದು ದಿನವಿಡೀ ವಿದ್ಯುತ್ ವ್ಯತ್ಯಯ ಎದುರಾಗಲಿದ್ದು, ಮುಗುಳವಳ್ಳಿ ವಿದ್ಯುತ್ ಉಪಕೇಂದ್ರದಲ್ಲಿ 2026-27ನೇ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಗಾಲದ ಮುನ್ನ ಸುರಕ್ಷತಾ ಕ್ರಮವಾಗಿ ಕೈಗೊಳ್ಳಲಾಗುತ್ತಿರುವ ಈ ನಿರ್ವಹಣಾ ಕಾರ್ಯದ ಹಿನ್ನೆಲೆ ಮುಗುಳವಳ್ಳಿ ಕೇಂದ್ರದ ವ್ಯಾಪ್ತಿಯ ಮರ್ಲೆ, ಯಗಚಿ ವಾಟರ್ ಸಪ್ಲೈ, ಮುಗಳವಳ್ಳಿ ಇಂಡಸ್ಟ್ರಿಯಲ್ ಹಾಗೂ ಕ್ರಷರ್ ಇಂಡಸ್ಟ್ರಿಯಲ್ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದ್ದು, ಮುಗಳವಳ್ಳಿ, ಅಂಬಳೆ, ಹರಿಹರದಹಳ್ಳಿ, ಕರ್ತಿಕೆರೆ ಹಾಗೂ ಲಕ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದರೆ ರೈತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5ರಿಂದ 10 ಗಂಟೆಯವರೆಗೆ 3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಮಳೆಯ ಆರ್ಭಟದಿಂದ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳುತ್ತಿರುವ ಪರಿಸ್ಥಿತಿಯಲ್ಲೇ ಈ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.



