
ಶೃಂಗೇರಿ : ತಾಲೂಕಿನಲ್ಲಿ ನಕ್ಸಲ್ ನಿಗ್ರಹ ಪಡೆ, ಕೆರಕಟ್ಟೆ ಹಾಗೂ ಕೆ. ಅಮರನಾಥ ಚಾರಿಟೇಬಲ್ ಟ್ರಸ್ಟ್ (ರಿ.) ಮೂಡುಬಿದರೆ, ಎ.ಬಿ. ಶೆಟ್ಟಿ ಮೆಮೊರಿಯಲ್ ಇನ್ಸ್ ಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಿಟ್ಟೆ (ಡಿ.ಯು.), ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ತೀರ್ಥಹಳ್ಳಿ ಇವರ ಸಹಯೋಗದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಚಿಕಿತ್ಸೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಶಿಬಿರವು 17-05-2026 ರ ರವಿವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ನೆಮ್ಮಾರು ಗ್ರಾಮದಲ್ಲಿನ ಮಹರ್ಷಿ ವಾಲ್ಮಿಕಿ ಬುಡಕಟ್ಟು ಆಶ್ರಮ ಶಾಲೆಯಲ್ಲಿ ನಡೆಯಲಿದೆ. ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ದಂತ, ಬಾಯಿ, ಮೂಳೆ ಹಾಗೂ ಬಿ.ಪಿ. ಮತ್ತು ಶುಗರ್ ತಪಾಸಣೆ, ಪ್ರಸೂತಿ ಮತ್ತು ಸ್ತ್ರೀರೋಗ ಹಾಗೂ ಚರ್ಮರೋಗ ಸಂಬಂಧಿತ ಖಾಯಿಲೆಗಳ ತಪಾಸಣೆ ಸೇರಿದಂತೆ ಉಚಿತ ಆರೋಗ್ಯ ಸೇವೆಗಳು ಹಾಗೂ ಉಚಿತ ಕನ್ನಡಕ ವಿತರಣೆ ಇರಲಿದೆ. ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದು, ಹೆಚ್ಚಿನ ಮಾಹಿತಿಗಾಗಿ 9449221663 ಹಾಗೂ 7026599077 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.




