
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತ ಬಳಕೆಯ ಕರೆಗೆ ಸ್ಪಂದಿಸಿ ತಮ್ಮ ಬೆಂಗಾವಲು (ಎಸ್ಕಾರ್ಟ್) ವಾಹನವನ್ನು ಹಿಂಪಡೆಯುವಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಧಾನ ಪರಿಷತ್ ಉಪ ಸಭಾಪತಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ಎಂ.ಕೆ. ಪ್ರಾಣೇಶ್ ಅವರು ಅಧಿಕೃತ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕ ಹಣದ ಜವಾಬ್ದಾರಿಯುತ ಬಳಕೆ ಮತ್ತು ಇಂಧನ ಸಂರಕ್ಷಣೆ ಅಗತ್ಯ ಎಂಬ ಸಂದೇಶವನ್ನು ನೀಡಿರುವ ಅವರು, ಸರಳತೆ ಹಾಗೂ ಹೊಣೆಗಾರಿಕೆಗೆ ಆದ್ಯತೆ ನೀಡಿ ಸರ್ಕಾರದ ಅನಗತ್ಯ ವೆಚ್ಚ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಉಪ ಸಭಾಪತಿಯ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಮಾದರಿಯಾಗಬೇಕು ಎಂಬ ಸಂದೇಶವನ್ನೂ ಎಂ.ಕೆ. ಪ್ರಾಣೇಶ್ ಅವರು ತಮ್ಮ ಕ್ರಮದ ಮೂಲಕ ನೀಡಿದ್ದಾರೆ.




