
ಚಾಮರಾಜನಗರ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣ ದಲ್ಲಿ 19ರ ಮಂಗಳವಾರ ಸಂಜೆ 5 ಗಂಟೆಗೆ ಭಾರತದ ಮಾಜಿ ಪ್ರಧಾನಿಗಳು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್ ಡಿ ದೇವೇಗೌಡರ ಜನ್ಮದಿನ ಹಾಗೂ ಕೊಡುಗೆಗಳ ಕುರಿತು ಕಾರ್ಯಕ್ರಮ ರೂಪಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ವಹಿಸಲಿದ್ದಾರೆ. ಸರ್ವರೂ ಆಗಮಿಸಿ ಯಶಸ್ವಿಗೊಳಿಸಿ ಕೊಡಬೇಕೆಂದು ಕಸಾಪ ಸದಸ್ಯ ಶಿವಲಿಂಗಮೂರ್ತಿ ಕೋರಿದ್ದಾರೆ.




