
ಎಸ್ಎಸ್ಎಲ್ಸಿ 2026ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ನಗದು ಪ್ರೋತ್ಸಾಹಧನ ಘೋಷಿಸಿದ್ದು, ಶೇ. 60 ರಿಂದ 74.99 ಅಂಕ ಪಡೆದವರಿಗೆ ರೂ. 7,000 ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ರೂ. 15,000 ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಯೋಜನೆಗೆ ಆದಾಯ ಮಿತಿ ಇಲ್ಲದೆ, ರಾಜ್ಯ ಪಠ್ಯಕ್ರಮದ ಜೊತೆಗೆ CBSE ಮತ್ತು ICSE ವಿದ್ಯಾರ್ಥಿಗಳೂ ಅರ್ಹರಾಗಿದ್ದಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ತಮ್ಮ ಆಧಾರ್ ಲಿಂಕ್ ಬ್ಯಾಂಕ್ ಖಾತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು swdservices.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ ‘Prize Money Application’ ವಿಭಾಗದಲ್ಲಿ ನೋಂದಣಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ, ನಂತರ ಬಂದ ಸ್ವೀಕೃತಿ ಪ್ರತಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಆಧಾರ್ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕಾಗಿದೆ ಎಂದು ತಿಳಿಸಲಾಗಿದೆ.




