
ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಒಟ್ಟು 5,000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಪದವೀಧರರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯೋಮಿತಿ ಮೇ 1, 2026ರ ವೇಳೆಗೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷವಾಗಿದ್ದು, ಸರ್ಕಾರದ ನಿಯಮಗಳ ಪ್ರಕಾರ SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳವರೆಗೆ ಸಡಿಲಿಕೆ ಲಭ್ಯವಿದೆ. ಅರ್ಜಿ ಶುಲ್ಕವನ್ನು ವರ್ಗಾನುಸಾರ ನಿಗದಿಪಡಿಸಲಾಗಿದ್ದು, ಸಾಮಾನ್ಯ, EWS ಮತ್ತು OBC ಪುರುಷ ಅಭ್ಯರ್ಥಿಗಳಿಗೆ ರೂ. 800, ಮಹಿಳಾ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ರೂ. 600 ಹಾಗೂ SC, ST ಮತ್ತು PwBD ಅಭ್ಯರ್ಥಿಗಳಿಗೆ ರೂ. 200 ಆಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಆನ್ಲೈನ್ ಲಿಖಿತ ಪರೀಕ್ಷೆ (Remote Proctored), ದಾಖಲೆ ಪರಿಶೀಲನೆ ಮತ್ತು ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಒಳಗೊಂಡಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ರೂ. 15,000 ಸ್ಟೈಫಂಡ್ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು NAPS ಅಥವಾ NATS ಪೋರ್ಟಲ್ನಲ್ಲಿ ನೋಂದಾಯಿಸಿ ನಂತರ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ಸೈಟ್ ಮೂಲಕ ಜೂನ್ 8, 2026ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.




