
ಶಿವಮೊಗ್ಗ: ನಗರದ ಆರ್.ಎಂ.ಸಿ. ಗೇಟ್ ಬಳಿ ಕಾರಿನಲ್ಲಿ ಗುಂಪು ಕಟ್ಟಿಕೊಂಡು ಮೊಬೈಲ್ ಆಪ್ ಮೂಲಕ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಮೇ 21ರ ರಾತ್ರಿ ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದ್ದು, ಬಂಧಿತರು ಮೊಬೈಲ್ ಆಪ್ ಬಳಸಿ ಬೆಟ್ಟಿಂಗ್ ನಡೆಸುತ್ತಿರುವುದನ್ನು ಒಪ್ಪಿಕೊಂಡಿದ್ದು, ಈ ವೇಳೆ 35,000 ರೂ. ನಗದು, 7 ಮೊಬೈಲ್ ಫೋನ್ಗಳು ಹಾಗೂ ಸುಮಾರು 6 ಲಕ್ಷ ರೂ. ಮೌಲ್ಯದ ಮಹೇಂದ್ರ ಎಕ್ಸ್ಯುವಿ 300 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ನಡೆದ ಈ ದಾಳಿಗೆ ಸಂಬಂಧಿಸಿದಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಲಾಗಿದೆ.



