
ಚಿಕ್ಕಮಗಳೂರು: ಜಪಾನ್ನ ನಾಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026 ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 4×100 ಮೀಟರ್ ರಿಲೇ ವಿಭಾಗದಲ್ಲಿ ಭಾರತ ಕಂಚಿನ ಪದಕ ಗೆದ್ದಿದ್ದು, ಈ ಸಾಧನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಮಲೆನಾಡಿನ ಕ್ರೀಡಾಪಟು ಸ್ನೇಹಾ ಕೂಡ ತಂಡದ ಸದಸ್ಯೆಯಾಗಿದ್ದರು. ಶಾಲಾ ದಿನಗಳಿಂದಲೇ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಸ್ನೇಹಾ, ಇದೀಗ ಅಂತರರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸಿ ಪದಕ ಗೆಲ್ಲುವ ಮೂಲಕ ಮಲೆನಾಡಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಇದಕ್ಕೂ ಮುನ್ನ 2016ರಲ್ಲಿ ಸ್ನೇಹಾ ಅವರ ಕ್ರೀಡಾ ಸಾಧನೆಯನ್ನು ಗುರುತಿಸಿ ಪಬ್ಲಿಕ್ ಮಿರರ್ ವತಿಯಿಂದ ಅವರನ್ನು ಸನ್ಮಾನಿಸಲಾಗಿತ್ತು. ಇದೀಗ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ನೇಹಾ ಅವರ ಸಾಧನೆಗೆ ಚಿಕ್ಕಮಗಳೂರು ಜಿಲ್ಲೆಯ ಕ್ರೀಡಾಭಿಮಾನಿಗಳು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.




