
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಸುಪ್ರೀತಾ (13) ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಊಟ ಮಾಡುವ ವೇಳೆ ತಟ್ಟೆ ಬಿದ್ದು ಅನ್ನ ಚೆಲ್ಲಿದ ಹಿನ್ನೆಲೆ ತಾಯಿ ಬುದ್ಧಿವಾದ ಹೇಳಿ, ಟಿವಿ ನೋಡದೆ ಓದಬೇಕು ಹಾಗೂ ಚೆಲ್ಲಿದ ಅನ್ನವನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿ ಕೆಲಸಕ್ಕೆ ತೆರಳಿದ್ದಾರೆ. ತಾಯಿ ಮನೆ ಬಿಟ್ಟ ಬಳಿಕ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




