
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಲಾರಿಯಲ್ಲಿ ತುಂಬಿಕೊಂಡಿದ್ದ ಕ್ಲೋರೈಡ್ ಕೆಮಿಕಲ್ ಸೋರಿಕೆಯಾಗಿದೆ. ಈ ಅಪಘಾತದಿಂದ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಾಹಿತಿ ತಿಳಿದ ನೆಲಮಂಗಲ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕದ ಸಿಬ್ಬಂದಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ.



