ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಆಂಧ್ರ ಮೂಲದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿನಯ್ ರೆಡ್ಡಿ (26) ಎಂಬ ಯುವಕ ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ನಿಂದ ಹಾರಿ ಜೀವತ್ಯಾಗ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಭೋಪಾಲ್ ಕಂಪನಿಯಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ರೆಡ್ಡಿ, ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಮುಳುಗು ತಜ್ಞ ಮಲ್ಪೆ ಈಶ್ವರ ಅವರ ಸಹಾಯದಿಂದ ಶವ ಪತ್ತೆಯಾಗಿದೆ. ಈ ಕುರಿತು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
