ಚಿಕ್ಕಮಗಳೂರು: ಬೇಲೂರು ಬಳಿಕ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ರೈತನನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ದನವನ್ನು ಹುಡುಕಿಕೊಂಡು ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
