
ಉತ್ತರಕನ್ನಡ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮ ಹಾಗೂ 11ನೇ ಬ್ರಾಹ್ಮಣ ಮಹಾಸಮ್ಮೇಳನ 2025ರ ಜನವರಿ 18 ಮತ್ತು 19 ತಾರೀಖಿನಂದು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಯೋಗ ಮಂದಿರದಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಡಾ ಬಿಎಸ್ ರಾಘವೇಂದ್ರ ಭಟ್ ಹಾಜರಿದ್ದು ಅವರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು ಜೊತೆಗೆ ಜಿಲ್ಲಾ ಬ್ರಾಹ್ಮಣ ಸಭಾದ ಉಪಾಧ್ಯಕ್ಷರಾದ ಶ್ರೀಯುತ ಶಿವಶಂಕರ್ ಹೆಗಡೆ, ಜಿಲ್ಲೆಯ ಎಲ್ಲಾ ಸಂಚಾಲಕರು ಹಾಜರಿದ್ದರು, ಸಮಾರಂಭಕ್ಕೆ ನಮ್ಮ ಸಂಪೂರ್ಣ ಸಹಕಾರ ಬೆಂಬಲವಿದೆ ಎಂದಿದ್ದಾರೆ.