
AKBMS ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮ ಹಾಗೂ 11ನೇ ಬ್ರಾಹ್ಮಣ ಮಹಾಸಮ್ಮೇಳನ ಅಂಗವಾಗಿ ಕೋಟಿ ಗಾಯತ್ರಿ ಜಪ ಹಾಗೂ ಗಾಯತ್ರಿ ಮಹಾಯಾಗವನ್ನು ಹಮ್ಮಿಕೊಳ್ಳಲಾಗಿದ್ದು, ಯಾಗದ ಪೂರ್ಣಾಹುತಿಯು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶಖರ ಭಾರತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಲಿದೆ. ಸುವರ್ಣ ಸಂಭ್ರಮವು 2025ರ ಜನವರಿ 18 & 19 ತಾರೀಖಿನಂದು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಬ್ರಾಹ್ಮಣ ಸಭಾ ಕಛೇರಿ, ರಂಗಣ್ಣನವರ ಛತ್ರದಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಡಾ ಬಿಎಸ್ ರಾಘವೇಂದ್ರ ಭಟ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.
ಈ ವೇಳೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಮಹಾಬಲ, ಚಿಕ್ಕಮಗಳೂರು ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಮಂಜುನಾಥ್ ಜೋಶಿ, ಶೃಂಗೇರಿ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಸತೀಶ್ ಜಿ.ಎಮ್, ಕೊಪ್ಪ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಕೆಸಕೊಡಿಗೆ ಎನ್.ಆರ್ ಪುರ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಗಣೇಶ್ ಕೊನೊಡಿ, ಹಾಗೂ ಕಾರ್ಯದರ್ಶಿಗಳು, ಪದಾಧಿಕಾರಿಗಳು ವಿವಿಧ ಬ್ರಾಹ್ಮಣ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಹಾಜರಿದ್ದು, ಈ ಸಮಾರಂಭಕ್ಕೆ ಸಹಕರಿಸುತ್ತೇವೆ ಎಂದರು. ಹಾಗೆ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಡಾ ಬಿಎಸ್ ರಾಘವೇಂದ್ರ ಭಟ್ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷರು , ಕಾರ್ಯದರ್ಶಿಗಳು ಪದಾಧಿಕಾರಿಗಳು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಾಗೂ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡಿರುವ ಕೋಟಿ ಗಾಯತ್ರಿ ಜಪಕ್ಕೆ ಸಹಕರಿಸುತ್ತೇವೆ ಎಂದಿದ್ದಾರೆ ಇವರಿಗೆ ಬ್ರಾಹ್ಮಣ ಮಹಾಸಭಾದಿಂದ ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.