
ಚಿಕ್ಕಮಗಳೂರು: ಮಲೆನಾಡಿನಲ್ಲಿ ಸಿಗುವ ಕೆಸ (ಸೊಪ್ಪು) ತರಲು ಹೋಗಿದ್ದ ವೃದ್ಧೆಯೊಬ್ಬರು ಹೇಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ. ಸುಬ್ಬಮ್ಮ (65) ಬೆಳಗ್ಗೆ ಕೆಸ ತರಲು ಹೋಗುವುದಾಗಿ ಹೇಳಿ ಮನೆದಿಂದ ಹೊರಟಿದ್ದರೂ ಸಂಜೆವರೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದರು. ಬಳಿಕ ಸಂಜೆ ವೇಳೆ ಹೇಮಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಸಮಾಜ ಸೇವಕ ಆರೀಫ್ ಅವರ ತಂಡ ಮೃತದೇಹವನ್ನು ಹೊರತೆಗೆದಿದೆ. ಘಟನಾ ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.




