
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ ಇನ್ಫೋಸಿಸ್ ಸಿಎಸ್ಆರ್ ಸಹಯೋಗದಲ್ಲಿ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಕಾರ್ಯಕ್ರಮವನ್ನು ಘೋಷಿಸಿದೆ. ಮಾರ್ಚ್ 25ರಿಂದ 27ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ನಡೆಯಲಿರುವ ಈ ಮೂರು ದಿನಗಳ ತರಬೇತಿಯಲ್ಲಿ ಡಿಜಿಟಲ್ ಮಾಧ್ಯಮ, ಕೃತಕ ಬುದ್ಧಿಮತ್ತೆ (ಎಐ), ಸಾಫ್ಟ್ ಸ್ಕಿಲ್ ಹಾಗೂ ನಾಯಕತ್ವ ಅಭಿವೃದ್ಧಿ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಮಾರ್ಚ್ 10ರೊಳಗೆ ಗೂಗಲ್ ಫಾರ್ಮ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಆಯ್ಕೆಯಾದವರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುತ್ತದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.



