
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11 ಆಶಾಕಿರಣ ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಕರ್ನಾಟಕ ಸರ್ಕಾರದ ಆಶಾಕಿರಣ ಯೋಜನೆಯು ದೃಷ್ಟಿ ಸಮಸ್ಯೆಯ ವಿರುದ್ಧದ ಹೋರಾಟದಲ್ಲಿ ಪ್ರಮುಖ ಹೆಜ್ಜೆ ಇರಿಸಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಹಾಗೂ ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ ಹಾಗೂ ಸೈಟ್ ಸೇವರ್ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಬೆಂಗಳೂರಿನ ಗೋವಿಂದರಾಜನಗರ ಎಂ.ಸಿ ಲೇಔಟ್ನ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ “ಆಶಾಕಿರಣ ದೃಷ್ಟಿ ಕೇಂದ್ರ”ವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯ ಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವರು ಉದ್ಘಾಟಿಸಿದರು. ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಿರುವ, ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳ ಮೂಲಕ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ದೃಷ್ಠಿ ದೋಷವಿರವವರಿಗೆ ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಸೇವೆಗಳನ್ನು ನೀಡುವುದಾಗಿದೆ ಎಂದು ಹೇಳಲಾಗಿದೆ
ಕರ್ನಾಟಕದಾದ್ಯಂತ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಆಶಾಕಿರಣ ದೃಷ್ಟಿ ಕೇಂದ್ರವನ್ನು ಪರಿಚಯಿಸಿದೆ. ಆಶಾಕಿರಣ ಕಾರ್ಯಕ್ರಮ ಸಿ.ಎಸ್.ಆರ್ ಸಂಸ್ಥೆರವರ ಸಹಯೋಗದೊಂದಿಗೆ ಆಶಾಕಿರಣ ಕಾರ್ಯಕ್ರಮದಡಿಯಲ್ಲಿ ಒಟ್ಟು ೧೩ ಆಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿ.ಎಸ್.ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಮಾಡಲಾಗಿದೆ.