
ಬೆಂಗಳೂರು: ಹಲವಾರು ವರ್ಷಗಳಿಂದ ಶಿಕ್ಷಕರು ಮಕ್ಕಳ ಹೆಸರನ್ನು ಕೂಗಿ ಹಾಜರಾತಿಯನ್ನು ಪಡೆಯುತ್ತಿದ್ದರು ಆದರೆ ಈ ವರ್ಷಗಳಿಂದ ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಮುಖ ಸ್ಕ್ಯಾನ್ ಮಾಡುವ ಮೂಲಕ ಹಾಜರಾತಿಯನ್ನು ಪಡೆದುಕೊಳ್ಳಲಿದ್ದಾರೆ. ಈ ಯೋಜನೆಯನ್ನು ಸುಮಾರು ೫ ಕೋಟಿ ರೂ ವೆಚ್ಚದಲ್ಲಿ ಕೆಎಸ್ಡಿಸಿ ಮೂಲಕ ನಿರ್ವಹಣೆ ಮಾಡುಲಾಗುತ್ತದೆ. ಇದಕ್ಕಾಗಿ ಸಾಫ್ಟವೇರ್ಗಳನ್ನು ಸಿದ್ದಮಾಡಲಾಗುತ್ತಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಿವ ಆದೇಶವನ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದ್ದಾರೆ.