
ಬಾಳೆಹೊನ್ನೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿದ್ದ ಡಿ.ಎನ್.ಜೀವರಾಜ್ ಅವರ ಜನ್ಮದಿನದ ಪ್ರಯುಕ್ತ ಬಾಳೆಹೊನ್ನೂರಿನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕ್ಷೇತ್ರದ ಅಭಿವೃದ್ಧಿ ಹಾಗೂ ಜನಪರ ಮತ್ತು ರೈತಪರ ಹೋರಾಟಗಳ ಮೂಲಕ, ಸಂಪರ್ಕ ರಸ್ತೆಗಳು, ಬಡಾವಣೆಗಳ ರಸ್ತೆಗಳಿಗೆ ಕಾಂಕ್ರೀಟ್ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೊಡುಗೆ ನೀಡಿರುವ ಡಿ.ಎನ್.ಜೀವರಾಜ್ ಅವರನ್ನು ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಎಂದು ಸ್ಮರಿಸಲಾಯಿತು. ಇದೇ ಸಂದರ್ಭದಲ್ಲಿ ದೇವಿರಮ್ಮ ಅನಾಥ ಆಶ್ರಮಕ್ಕೆ ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳನ್ನು ದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ದಿಶಾಸಮಿತಿ ಸದಸ್ಯ ಮಣಿಕಂಠನ್ ಕಂದಸ್ವಾಮಿ, ಬಿಎಸ್ಎನ್ಎಲ್ ನಾಮನಿರ್ದೇಶಿತ ಸದಸ್ಯ ವಿನೋದ್ ಬೊಗಸೆ, ಮುಖಂಡರಾದ ವೆಂಕಟೇಶ್, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜು ಶೆಟ್ಟಿ, ಕಲ್ಲೇಶ್, ಸುರೇಂದ್ರ, ಸಂತೋಷ್, ಶಶಿಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




