
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ಚುರುಕು ಪಡೆದಿದ್ದು, ಮುಂದಿನ ಮೂರು ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂಬ ಮುನ್ಸೂಚನೆ ಇದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು ಶನಿವಾರದಿಂದ ಮುಂದಿನ ಮೂರು ದಿನಗಳು ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಿಲ್ಲೆಗಳಿಗಾಗಿ ಎಚ್ಚರಿಕೆಯ ಅಲರ್ಟ್ ಪ್ರಕಟಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ, ಈ ಭಾಗದ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಮಂಡ್ಯ ಮತ್ತು ರಾಮನಗರ ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ, ಈ ಭಾಗದ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.