
ಬ್ರಹ್ಮಾವರ: ಆನ್ಲೈನ್ನಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚನೆ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು. ಹೆಚ್ಚಿನ ಲಾಭವನ್ನು ನೀಡುವುದಾಗಿ ಆಮಿಷತೋರಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ನಡೆದಿದ್ದು. ಸುಗುಣ ಎಂಬುವವರಿಗೆ ವರ್ಕ್ಫ್ರಮ್ ಹೋಮ್ ಎಂಬ ಹೆಸರಿನಲ್ಲಿ ಹೆಚ್ಚಿನ ಲಾಭ ಬರುವ ಜಾಹಿರಾತನ್ನು ಸೈಬರ್ ಅಪರಾಧಿಗಳು ಕಳುಹಿಸಿದ್ದರು. ಅದನ್ನು ನಂಬಿದ ಸುಗುಣ ಮಾರ್ಚ್ 5 ರಿಂದ 22ರ ಮಧ್ಯಾವಧಿಯಲ್ಲಿ ಬ್ಯಾಂಕ್ ಖಾತೆಯಿಂದ ಆರೋಪಿಗಳು ಹೇಳಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 3,92,250 ರೂ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸಂಬಂಧ ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.