
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮನೆಯೊಂದರಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಕೊಲೆಯಾದ ದುರ್ದೈವಿಗಳು. ದಂಪತಿಯ 31 ವರ್ಷದ ಪುತ್ರ ಶಾಹಿದ್ ಅಲಿ ಎಂಬಾತನೇ ತಂದೆ ಮೆಹಬೂಬ್ ಹಾಗೂ ತಾಯಿ ಸಂಶದ್ ಬೇಗಂ ಅವರನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಆದರೆ ದಂಪತಿಯ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.




