
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲೊಂದಾದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ವೃಂದದ 21 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. 18ರಿಂದ 25 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತಾಂತ್ರಿಕ ಹಾಗೂ ತಾಂತ್ರಿಕೇತರ ಹಿನ್ನೆಲೆಯ ಅಭ್ಯರ್ಥಿಗಳಿಗೆ ಅವಕಾಶವಿದೆ. 10ನೇ ತರಗತಿ ಉತ್ತೀರ್ಣರಾಗಿರುವುದರ ಜೊತೆಗೆ ಸಂಬಂಧಿಸಿದ ಟ್ರೇಡ್ನಲ್ಲಿ 3 ವರ್ಷದ ಐಟಿಐ ಪ್ರಮಾಣಪತ್ರ ಅಥವಾ ಡಿಪ್ಲೊಮಾ ಹೊಂದಿರಬೇಕು. ಇದೇ ವೇಳೆ ಕೌನ್ಸಿಲರ್ ಹುದ್ದೆಗಳ 16 ಸ್ಥಾನಗಳಿಗೂ ನೇಮಕಾತಿ ನಡೆಯಲಿದ್ದು, 20ರಿಂದ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ದೈಹಿಕ ಪರೀಕ್ಷೆ, OMR ಮಾದರಿಯ ಲಿಖಿತ ಪರೀಕ್ಷೆ ಹಾಗೂ ಪ್ರಾಕ್ಟಿಕಲ್/ಸ್ಕಿಲ್ ಟೆಸ್ಟ್ ಸೇರಿದಂತೆ ಮೂರು ಹಂತಗಳಿರಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ₹25,500ರಿಂದ ₹81,100ರವರೆಗೆ ಮೂಲ ವೇತನ ಹಾಗೂ ಇತರೆ ಭತ್ಯೆಗಳು ದೊರೆಯಲಿವೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.




