ಚಳಿಗಾಲದಲ್ಲಿ ಎಳನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ ಎಂಬ ಪ್ರಶ್ನೆ ಇದ್ದರೂ, ಮಿತ ಪ್ರಮಾಣದಲ್ಲಿ ಸೇವಿಸಿದರೆ ಇದು ದೇಹಕ್ಕೆ ಲಾಭಕರ. ಎಳನೀರು ದೇಹವನ್ನು ಹೈಡ್ರೇಟ್ ಮಾಡಿ ಚರ್ಮದ ಒಣಗುವಿಕೆ ಕಡಿಮೆ ಮಾಡಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಇದರಲ್ಲಿ ಇರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಆದರೆ ಎಳನೀರನ್ನು ಬೆಳಿಗ್ಗೆ ಅಥವಾ ಮಧ್ಯಾಹ್ನದ ವೇಳೆ ಸಾಮಾನ್ಯ ತಾಪಮಾನದಲ್ಲೇ ಕುಡಿಯಬೇಕು. ರಾತ್ರಿ, ತಡಸಂಜೆ ಅಥವಾ ಅತಿಯಾಗಿ ಸೇವಿಸುವುದನ್ನು, ವಿಶೇಷವಾಗಿ ಶೀತ ಅಥವಾ ಸೈನಸ್ ಸಮಸ್ಯೆ ಇರುವವರು, ಎಳನೀರು ಕುಡಿಯುವುದನ್ನು ತಪ್ಪಿಸುವುದು ಉತ್ತಮ.
