
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಸಮೀಪದ ಕೋಡೂರಿನಲ್ಲಿ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ಕಾರು ಅಪಘಾತಕ್ಕೆ ಒಳಗಾಗಿದ್ದು. ನಿನ್ನೆ ಸಂಜೆ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಜಾನುವಾರು ಬಂದ ಕಾರಣ ಈ ಅಪಘಾತವಾಗಿದೆ ಎನ್ನಲಾಗಿದೆ. ಇದರಿಂದ ಶಾಸಕರ ಸಂಭಂದಿಸಿದ ೩ ಕಾರುಗಳು ಸ್ವಲ್ಪ ಜಕ್ಕಂ ಆಗಿದೆ. ರಿಪ್ಪನ್ಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.