
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




