
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟಿನ್ನಲ್ಲಿ ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ. ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು. ಅಜಯ್(23) ಹಾಗೂ ಯತೀಶ್(23) ನನ್ನು ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಅಜಯ್ ತಲೆಗೆ 7-8 ಕಡೆ ಮಚ್ಚಿನ ಒದೆ ಬಿದ್ದಿದ್ದು ಸ್ಥಿತಿ ತೀವ್ರ ಗಂಭೀರವಾಗಿದೆ. ಯತೀಶ್ ಎಡಗೈಗೆ ಗಂಭೀರ ಗಾಯವಾಗಿದ್ದು ನರಗಳು ಕಟ್ ಆಗಿವೆ. ಬಸವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.