
ಚಿಕ್ಕಮಗಳೂರು: ಜಿಲ್ಲೆಯ ಕೊಡಾಳ್ ಸಮೀಪ ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಎಂಟು ಜನರು ಗಾಯಗೊಂಡ ಘಟನೆ ವರದಿಯಾಗಿದೆ. ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ನಿರ್ವಹಣಾ ಸಮಸ್ಯೆಯೇ, ಚಾಲಕನ ನಿಯಂತ್ರಣ ತಪ್ಪಿದ್ದೋ ಅಥವಾ ಅತಿಯಾದ ವೇಗವೇ ಎಂಬುದು ಸ್ಪಷ್ಟವಾಗಿಲ್ಲ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




